Monday, November 17, 2008

huttidare kannada nadalli huttabeku annavru rajkumar.- akasmika Lyrics

huttidare kannada nadalli huttabeku annavru rajkumar.- akasmika Lyrics

ಹೇ ಹೇ ಬಾಜೂ.. ಲಾಲ ತಗಡಗ ಲಾಲ ತಗಗಡ ಹೇ ಹೇ ...

ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು
ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು
ಬದುಕಿದು ಜಟಕ ಬಂಡಿ,
ಇದು ವಿಧಿ ಓಡಿಸುವ ಬಂಡಿ
ಬದುಕಿದು ಜಟಕ ಬಂಡಿ
ಬದುಕಿದು ಜಟಕ ಬಂಡಿ
ವಿಧಿ ಅಲೆದಾಡಿಸುವ ಬಂಡಿ...

||ಹುಟ್ಟಿದರೇ ಕನ್ನಡ ನಾಡಲ್ಲಿ....||

ಕಾಶಿಲಿ ಸ್ನಾನ ಮಾಡು
ಕಾಶ್ಮೀರ ಸುತ್ತಿ ನೋಡು
ಜೋಗದ ಗುಂಡಿ ಒಡೆಯ ನಾನೆಂದು ಕೂಗಿ ಹಾಡು
ಅಜಂತ ಎಲ್ಲೋರವ ಬಾಳಲ್ಲಿ ಒಮ್ಮೆ ನೋಡು
ಬಾದಾಮಿ ಐಹೊಳೆಯ ಚೆಂದಾನ ತೂಕಮಾಡು
ಕಲಿಯೋಕೆ ಕೋಟಿ ಭಾಷೆ ಆಡೋಕ್ಕೆ ಒಂದೇ ಭಾಷೆ ....ಕನ್ನಡಾ..ಕನ್ನಡಾ..ಕಸ್ತೂರಿ ಕನ್ನಡಾ

||ಹುಟ್ಟಿದರೇ ಕನ್ನಡ ನಾಡಲ್ಲಿ....||

ಧ್ಯಾನಕ್ಕೆ ಭೂಮಿ ಇದು, ಪ್ರೇಮಕ್ಕೆ ಸ್ವರ್ಗ ಇದು
ಸ್ನೇಹಕ್ಕೆ ಶಾಲೆ ಇದು ,ಜ್ಞಾನಕ್ಕೆ ಪೀಠ ಇದು
ಕಾವ್ಯಕ್ಕೆ ಕಲ್ಪ ಇದು, ಶಿಲ್ಪಕ್ಕೆ ತಲ್ಪ ಇದು
ನಾಟ್ಯಕ್ಕೆ ನಾಡಿ ಇದು, ನಾದಾಂತರಂಗವಿದು
ಕುವೆಂಪು ಬೇಂದ್ರೆಯಿಂದ ಕಾರಂತ ಮಾಸ್ತಿಯಿಂದ
ಧನ್ಯವೀ ಕನ್ನಡ ....ಗೋಕಾಕಿನ ಕನ್ನಡಾ..

||ಹುಟ್ಟಿದರೇ ಕನ್ನಡ ನಾಡಲ್ಲಿ....||

ಬಾಳಿನ ಬೆನ್ನು ಹತ್ತಿ
ನೂರಾರು ಊರು ಸುತ್ತಿ
ಏನೇನೋ ಕಂಡ ಮೇಲೂ
ನಮ್ಮೂರೇ ನಮಗೆ ಮೇಲು
ಕೈಲಾಸಂ ಕಂಡ ನಮಗೆ ಕೈಲಾಸಂ ಯಾಕೆ ಬೇಕು?
ದಾಸರ ಕಂಡ ನಮಗೆ ವೈಕುಂಠ ಯಾಕೆ ಬೇಕು?
ಮುಂದಿನ ನನ್ನ ಜನ್ಮ ಬರೆದಿಟ್ಟನಂತೆ ಬ್ರಹ್ಮ
ಇಲ್ಲಿಯೇ....ಇಲ್ಲಿಯೇ.... ಈ ಮಣ್ಣಿನಲ್ಲಿಯೇ
ಎಂದಿಗೂ ನಾನಿಲ್ಲಿಯೇ.....

||ಹುಟ್ಟಿದರೇ ಕನ್ನಡ ನಾಡಲ್ಲಿ.... ||

0 comments:

Post a Comment